
ಪ್ರಗತಿವಾಹಿನಿ ಸುದ್ದಿ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಎಂಎಲ್ ಸಿ ಸೂರಜ್ ರೇವಣ್ಣ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಜಡ್ಜ್ ಆದೇಶ ಹೊರಡಿಸಿದ್ದಾರೆ.
ಸೂರಜ್ ರೇವಣ್ಣ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿರುವ ಕಾರಣ ಇಂದು ಹಾಸನ ಪೊಲೀಸರು ಬೆಂಗಳೂರಿನ ಕೊರಮಂಗಲದ 42 ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಪೊಲೀಸರು ಇಂದು ಹಾಜರು ಪಡಿಸಿದರು. ಹೆಚ್ಚಿನ ವಿಚಾರಣೆಗೆ ಎಂಎಲ್ ಸಿ ಸೂರಜ್ ರೇವಣ್ಣ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ, ಆದೇಶ ಹೊರಡಿಸಿದ್ದಾರೆ.
ಈ ಪ್ರಕರಣವನ್ನು ಗೃಹ ಇಲಾಖೆ ಸಿಐಡಿಗೆ ವಹಿಸಿದೆ. ಇನ್ನೂ ಅಧಿಕೃತವಾಗಿ ಈ ಪ್ರಕರಣವನ್ನು ಸಿಐಡಿ ಪೊಲೀಸರು ತೆಗೆದುಕೊಂಡಿಲ್ಲ. ನಾಳೆ ಅಧಿಕೃತವಾಗಿ ಕೇಸ್ ತಗೆದುಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ. ಸೂರಜ್ ರೇವಣ್ಣ ಅವರನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿರುವ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿಗೆ ಶಿಪ್ಟ್ ಮಾಡುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ