ಪ್ರಗತಿವಾಹಿನಿ ಸುದ್ದಿ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಎಂಎಲ್ ಸಿ ಡಾ. ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಸೂರಜ್ ರೇವಣ್ಣ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
2 ಲಕ್ಷ ರೂ ಬಾಂಡ್, ಇಬ್ಬರ ಶ್ಯೂರಿಟಿ ಹಾಗೂ ತನಿಖೆಗೆ ಸಹಕರಿಸುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದೆ. ಸಂತ್ರಸ್ತರನ್ನು ಭೇಟಿಯಾಗುವಂತಿಲ್ಲ. ಸಾಕ್ಷ್ಯ ನಾಶಕ್ಕೆ ಯತ್ನಿಸುವಂತಿಲ್ಲ. ಕೋರ್ಟ್ ಅನುಮತಿಯಿಲ್ಲದೇ ವಿದೇಶಕ್ಕೆ ತೆರಳುವಂತಿಲ್ಲ ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ.
ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ಸೂರಜ್ ರೇವಣ್ಣ ವಿರುದ್ಧ ಎರಡು ಕೇಸ್ ದಾಖಲಾಗಿತ್ತು. ಒಂದು ಕೇಸ್ ನಲ್ಲಿ ಸೂರಜ್ ಅವರನ್ನು ಬಂಧಿಸಿದ್ದ ಪೊಲೀಸರು, ಇನ್ನೊಂದು ಕೇಸ್ ನಲ್ಲಿ ಬಾಡಿ ವಾರೆಂಟ್ ಪಡೆದು ವಿಚಾರಣೆ ನಡೆಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ