Kannada NewsKarnataka NewsLatestPolitics

*ಎಂಎಲ್ ಸಿ ಸೂರಜ್ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣರಿಗೆ ಮತ್ತೊಂದು ಶಾಕ್ ಎದುರಾಗಿದೆ.

ಎಸ್‌ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ತಿರಸ್ಕರಿಸಿತ್ತು. ಜೊತೆಗೆ ಮರು ತನಿಖೆಗೆ ಕೋರ್ಟ್‌ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೋರ್ಟ್​, ಸೂರಜ್ ರೇವಣ್ಣಗೆ ಮತ್ತೊಂದು ಶಾಕ್ ಕೊಟ್ಟಿದೆ.

ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಮರುಪರಿಶೀಲನಾ‌ ಅರ್ಜಿಯನ್ನು ಕೋರ್ಟ್​ ವಜಾ ಮಾಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಆದೇಶ ಹೊರಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button