Politics

*ಎಂಎಲ್ ಸಿ ಸೂರಜ್ ರೇವಣ್ಣ ಜೈಲುಪಾಲು*

ಪ್ರಗತಿವಾಹಿನಿ ಸುದ್ದಿ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್ ಆದೇಶ ನೀಡಿದೆ.

Home add -Advt

ಸಿಐಡಿ ಕಸ್ಟಡಿಯಲ್ಲಿರುವ ಸೂರಜ್ ರೇವಣ್ಣನನ್ನು ಇಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಸೂರಜ್ ರೇವಣ್ಣನನ್ನು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ಜೈಲು ಪಾಲಾಗಿದ್ದಾರೆ. ಈಗಾಗಲೇ ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸೂರಜ್ ಸಹೋದರ ಪ್ರಜ್ವಲ್ ರೇವಣ್ಣ ಕೂಡ ಜೈಲು ಸೇರಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದೀಗ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಸೂರಜ್ ರೇವಣ್ಣ ಕೂಡ ಜೈಲು ಪಾಲಾಗಿದ್ದಾರೆ.


Related Articles

Back to top button