
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್ ಬ್ಯಾಚ್ ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ನೂತನ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಅವರಿಗೆ ಶನಿವಾರ ಸಂಜೆ ಅಧಿಕಾರ ಹಸ್ತಾಂತರಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ಸರಕಾರ ಶನಿವಾರ ಸಂಜೆ ನೇಮಿಸಿದ್ದು,ನೂತನ ಆಯುಕ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹುದ್ದೆಗೆ ಜೊತೆಗ ಬಿಬಿಎಂಪಿ ವಿಶೇಷ ಆಯುಕ್ತರ ಸಮವರ್ತಿತ ಹುದ್ದೆಯಲ್ಲಿಯೂ ಮುಂದುವರಿಯಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ