ಸುರೇಶ ಅಂಗಡಿ ಪುತ್ರಿ, ಹುಬ್ಬಳ್ಳಿ ಸೊಸೆ ಬೆಳಗಾವಿ ಪಾಲಿಟಿಕ್ಸ್ ಗೆ ಎಂಟ್ರಿ – ವೀಡಿಯೋ ಸಹಿತ ವರದಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ಪುತ್ರಿ ಬೆಳಗಾವಿ ರಾಜಕಾರಣಕ್ಕೆ ಅಧಿಕೃತ ಎಂಟ್ರಿ ಕೊಟ್ಟಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ಸಂದರ್ಭದಲ್ಲಿ ಅವರು ಮೊದಲ ಬಾರಿಗೆ ಅಧಿಕೃತವಾಗಿ ರಾಜಕೀಯ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ.
ತನ್ಮೂಲಕ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸುರೇಶ ಅಂಗಡಿ ಅವರ ಕುಟುಂಬದವರಿಗೆ ಟಿಕೆಟ್ ನೀಡಲಾಗುತ್ತದೆ ಎನ್ನುವ ಸುದ್ದಿಗೆ ರಂಗು ಬಂದಿದೆ.
ಸುರೇಶ ಅಂಗಡಿ ಅವರ ಎರಡನೇ ಪುತ್ರಿ, ರಾಜ್ಯ ಕೈಗಾರಿಕೆ ಸಚಿವರೂ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಜಗದೀಶ್ ಶೆಟ್ಟರ್ ಅವರ ಸೊಸೆ ಶೃದ್ಧಾ ಶುಕ್ರವಾರ ಬೆಳಗಾವಿಯಲ್ಲಿ ಬಿಜೆಪಿ ಸಂಘಟಿಸಿದ್ದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪಕ್ಷ ಸಂಘಟಿಸಿರುವ ರೈತರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದಾಗಿ ಹೇಳಿದ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧೆ ಕುರಿತು ಮಾತನಾಡುವುದಿಲ್ಲ ಎಂದರು.
ಪ್ರಸ್ತುತ ಹುಬ್ಬಳ್ಳಿಯ ರಹವಾಸಿಯಾಗಿರುವ ಶೃದ್ಧಾ ಬೆಳಗಾವಿಗೆ ಬಂದು ಬಿಜೆಪಿ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಪಾಲ್ಗೊಳ್ಳುವ ಮೂಲಕ ಬೆಳಗಾವಿ ರಾಜಕೀಯಕ್ಕೆ ಹೊಸ ಭಾಷ್ಯ ಬರೆದರು.
ಈ ಸುದ್ದಿ ಓದಿ – ಸೊಸೆಗೆ ಟಿಕೆಟ್ ಕೊಡಿಸ್ತಾರಾ ಜಗದೀಶ್ ಶೆಟ್ಟರ್?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ