ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ನಿನ್ನೆ ನಿಧನರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅಂತ್ಯಕ್ರಿಯೆ ನವದೆಹಲಿಯಲ್ಲಿ ಇಂದು ಸಂಜೆ 4 ಗಂಟೆಗೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಅವರ ಪುತ್ರಿ ಸ್ಫೂರ್ತಿ, ಕುಟುಂಬದ ಧಾರ್ಮಿಕ ವ್ಯವಹಾರಗಳನ್ನು ನೋಡಿಕೊಳ್ಳುತ್ತಿರುವ ಬಾಳಯ್ಯ ಸ್ವಾಮಿ, ಅಂಗಡಿಯವರ ಕೆಲವು ಆಪ್ತಸಹಾಯಕರು ಸೇರಿದಂತೆ ಕೆಲವರು ಇಂದು ಬೆಳಗ್ಗೆ ಮುಂಬೈ ಮೂಲಕ ದೆಹಲಿಗೆ ತೆರಳಿದ್ದಾರೆ.
ಕೊರೋನಾದಿಂದ ನಿಧನರಾದ ಹಿನ್ನೆಲೆಯಲ್ಲಿ ಸುರೇಶ ಅಂಗಡಿಯವರ ಮೃತದೇಹವನ್ನು ಬೆಳಗಾವಿಗೆ ತರಲು ಅವಕಾಶ ನೀಡಲಾಗಿಲ್ಲ. ಅಲ್ಲದೆ ಅಂತ್ಯ ಸಂಸ್ಕಾರದಲ್ಲಿ 20 ಜನರು ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.
ಪತ್ನಿ ಮಂಗಲಾ, ಸಂಬಂಧಿ, ರಾಜ್ಯದ ಸಚಿವ ಜಗದೀಶ ಶೆಟ್ಟರ್, ಇನ್ನೋರ್ವ ಪುತ್ರಿ ಶೃದ್ಧಾ, ಬಿಜೆಪಿ ಮುಖಂಡ ರಾಜು ಚಿಕ್ಕನಗೌಡರ್ ಮೊದಲಾದವರು ಈಗಾಗಲೆ ದೆಹಲಿ ತಲುಪಿದ್ದಾರೆ.
ಅಂತ್ಯಸಂಸ್ಕಾರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಕೆಲವು ಸಚಿವರು ಸಹ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಹುಕ್ಕೇರಿ ಶ್ರೀ ಶೋಕ
ದೆಹಲಿಯಲ್ಲೇ ಸುರೇಶ ಅಂಗಡಿ ಅಂತ್ಯಕ್ರಿಯೆ
ರೈಲ್ವೆ ಸಚಿವರಾಗಿ ಬೆಳಗಾವಿಗೆ ದೊಡ್ಡ ಕೊಡುಗೆ ನೀಡಿದ್ದ ಅಂಗಡಿ; ಹಲವರ ಕಂಬನಿ
ಕೇಂದ್ರ ಸಚಿವ ಸುರೇಶ ಅಂಗಡಿ ನಿಧನ; ಬೆಳಗಾವಿಗೆ ದೊಡ್ಡ ಶಾಕ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ