Latest

ಬೈಕ್- ಸ್ಕೂಟರ್ ಡಿಕ್ಕಿ; ವಿದ್ಯಾರ್ಥಿನಿ ಸಾವು

ಪ್ರಗತಿವಾಹಿನಿ ಸುದ್ದಿ, ಮಡಿಕೇರಿ: ಕುಶಾಲನಗರದ ಕೂರ್ಗ ಸಿನಿಪ್ಲೆಕ್ಸ್ ಬಳಿ ಸ್ಕೂಟರ್ ಗೆ ಬೈಕ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ.

ಕುಶಾಲನಗರ ಇಂದಿರಾ ಬಡಾವಣೆಯ ಭಾವನಾ ಪೂಣಚ್ಚ (21) ಮೃತಪಟ್ಟವರು. ಭಾವನಾ ಅವರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಓದುತ್ತಿದ್ದು ತಮ್ಮ ಸಹಪಾಠಿ ಯುವತಿ ಜತೆ ಸ್ಕೂಟರ್ ನಲ್ಲಿ ತೆರಳುತ್ತಿದ್ದರು.

ಈ ವೇಳೆ ಸ್ಕೂಟರ್ ಗೆ ಬೈಕ್ ಡಿಕ್ಕಿಯಾದ ಪರಿಣಾಮ ಭಾವನಾ ಸ್ಥಳದಲ್ಲಿ ಮೃತಪಟ್ಟಿದ್ದು ಅವರ ಸಹಪಾಠಿ ಗಂಭಿರ ಗಾಯಗೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Related Articles

Back to top button