Kannada NewsLatest

ಬಿಜೆಪಿ ರಾಜ್ಯ ಕಚೇರಿಗೆ ಅಂಗಡಿ ಭೇಟಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಇಂದು ರಾಜ್ಯ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದರು.

ರಾಜ್ಯ ಬಿಜೆಪಿ ಕಾರ್ಯದರ್ಶಿ ಜಗದೀಶ್ ಹಿರೇಮನಿ ಮತ್ತಿತರ ಮುಖಂಡರು ಸಚಿವರಿಗೆ ಸಸಿ ನೀಡುವ ಮೂಲಕ ಸ್ವಾಗತಿಸಿದರು.

Home add -Advt

ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿದ ಅವರು ಪಕ್ಷದ ಹಿರಿಯ ನಾಯಕ ಜಗನ್ನಾಥ ರಾವ್ ಜೋಶಿ ಅವರ ಪುತ್ಥಳಿಗೆ ಗೌರವ ಸಲ್ಲಿಸಿದರು.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರು ಪುಷ್ಪ ಗುಚ್ಛ ನೀಡಿ ಸ್ವಾಗತಿಸಿದರಲ್ಲದೇ ಸಚಿವರಿಗೆ ಸಿಹಿ ತಿನ್ನಿಸಿ ಸಂತಸ ಹಂಚಿಕೊಂಡರು.

ಕಲಬುರಗಿ ಸಂಸತ್ ಸದಸ್ಯರಾದ ಡಾ.ಉಮೇಶ್ ಜಾಧವ್ ಮತ್ತಿತರರು ಹಾಜರಿದ್ದರು.

 

ಹೆಚ್ಚಿನ ಸುದ್ದಿಗಳಿಗಾಗಿ pragativahini.com ನೋಡಿ.

Related Articles

Back to top button