ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಕೇಂದ್ರ ರೈಲ್ವೆ ಖಾತ ರಾಜ್ಯ ಸಚಿವ ಸುರೇಶ ಅಂಗಡಿ ಭಾನುವಾರ ಬೆಳಗ್ಗೆ ಬೆಳಗಾವಿಯ ಕಪಿಲೇಶ್ವರ ರೈಲ್ವೆ ಓವರ್ ಬ್ರಿಜ್ ವೀಕ್ಷಣೆ ನಡೆಸಿದರು.
ನಂತರ ಕಪಿಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಡಾ.ಶಾಮಪ್ರಸಾದ ಮುಖರ್ಜಿ ಭಾವಚಿತ್ರಕ್ಕೂ ಅವರು ಪೂಜೆ ಸಲ್ಲಿಸಿದರು. ರೈಲ್ವೆ ನಿಲ್ದಾಣಕ್ಕೂ ತೆರಳಿ ಪರಿಶೀಲನೆ ನಡೆಸಿದರು.