Kannada NewsKarnataka NewsLatest

*ಮಾಜಿ ಶಾಸಕ ಸುರೇಶ್ ಗೌಡ ಕಾರು ಭೀಕರ ಅಪಘಾತ*

ಪ್ರಗತಿವಾಹಿನಿ ಸುದ್ದಿ: ಮಾಜಿ ಶಾಸಕ ಸುರೇಶ್ ಗೌಡ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.

ಪಕ್ಷದ ಕಾರ್ಯಕರ್ತರ ಮದುವೆಗೆಂದು ತೆರಳುತ್ತಿದ್ದಾಗ ಸುರೇಶ್ ಗೌಡ ಪ್ರಯಾಣಿಸುತ್ತಿದ್ದ ಕಾರು ಮಂಡ್ಯದ ಬೊಂತೆಕೊಪ್ಪಲು ಸಮೀಪ ತಡ ರಾತ್ರಿ ಅಪಘಾತಕ್ಕೀಡಾಗಿದೆ.

ಅದೃಷ್ಟವಶಾತ್ ಮಾಜಿ ಶಾಸಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ‌ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದ್ದು, ಸುರೇಶ್ ಗೌಡ ಕೈಗೆ ಪೆಟ್ಟಾಗಿದೆ.

ಕಾರು ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button