
ಪ್ರಗತಿವಾಹಿನಿ ಸುದ್ದಿ: ಕೇಂದ್ರದ ಮಾಜಿ ಸಚಿವ ಕಾಂಗ್ರೆಸ್ ಹಿರಿಯ ನಾಯಕ ಸುರೇಶ್ ಕಲ್ಮಾಡಿ ವಿಧಿವಶರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸುರೇಶ್ ಕಲ್ಮಾಡಿ ಮಂಗಳವಾರ ಪುಣೆಯ ದೀನನಾಥ್ ಮಂಗೇಶ್ವರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್ ವಾನೆಯಲ್ಲಿರುವ ಕಲ್ಮಾಡಿ ಹೌಸ್ ನಲ್ಲಿ ಇಡಲಾಗಿದ್ದು, ಮಧ್ಯಾಹ್ನ 2 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ 3:30ಕ್ಕೆ ವಕುಂಠ ಸ್ಮಶಾನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.




