Kannada NewsKarnataka NewsLatest

ಮರಾಠಿ ಮಾಧ್ಯಮದ ವಿದ್ಯಾರ್ಥಿಗಳ ನಾಡಗೀತೆ ಆಲಿಸಿದ ಸಚಿವರು

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ವಿವಿಧ ಸಭೆ-ಸಮಾರಂಭಗಳಲ್ಲಿ ಭಾಗವಹಿಸಲು ತಾಲೂಕಿಗೆ ಆಗಮಿಸಿದ್ದ ಶಿಕ್ಷಣ ಸಚಿವ ಸುರೇಶಕುಮಾರ ಮರಾಠಿ ಮಾಧ್ಯಮದ ವಿದ್ಯಾರ್ಥಿಗಳಿಂದ ನಾಡಗೀತೆ ಹಾಡಿಸಿ ಸಂತಸ ವ್ಯಕ್ತಪಡಿಸಿದ ಘಟನೆ ಸೋಮವಾರ ತಾಲೂಕಿನ ಜಾಂಬೋಟಿ ಗ್ರಾಮದ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಜಾಂಬೋಟಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಚಿವರು ಗ್ರಾಮದ ಮರಾಠಿ ಹಿರಿಯ ಪ್ರಾಥಮಿಕ ಶಾಲೆಗೆ ತೆರಳಿ ವಿದ್ಯಾರ್ಥಿಗಳನ್ನು ಮಾತನಾಡಿಸಿದರು. ಬಳಿಕ ಶಿಕ್ಷಕರಿಂದ ಮಕ್ಕಳ ಶೈಕ್ಷಣಿಕ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ೯ನೇ ತರಗತಿಯ ಮಕ್ಕಳಿಂದ ನಾಡಗೀತೆಯನ್ನು ಹಾಡಿಸಿ ತಾವೂ ಅವರೊಂದಿಗೆ ದನಿಗೂಡಿಸಿದರು. ಇದೇ ಸಂದರ್ಭದಲ್ಲಿ ಸಚಿವರು ನಿತ್ಯ ಶಾಲೆಯಲ್ಲಿ ರಾಷ್ಟ್ರಗೀತೆ ಮತ್ತು ನಾಡಗೀತೆಗಳನ್ನು ಮಕ್ಕಳು ಗಟ್ಟಿಯಾಗಿ ಹಾಡುವಂತೆ ಗಮನಹರಿಸುವಂತೆ ಶಿಕ್ಷಕರಿಗೆ ಸೂಚಿಸಿದರು.

 

Home add -Advt

Related Articles

Back to top button