Latest

1-9ನೇ ತರಗತಿ ಪರೀಕ್ಷೆ; ಒಂದೆರಡು ದಿನಗಳಲ್ಲಿ ನಿರ್ಧಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಕೊರೊನಾ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು ಮಾಡಬೇಕೇ ಅಥವಾ ಮುಂದೂಡಬೇಕೆ ಎಂಬ ಬಗ್ಗೆ ಶೀಘ್ರದಲ್ಲಿ ನಿರ್ಧರಿಸುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್, 1-9ನೇ ತರಗತಿ ಪರೀಕ್ಷೆ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಒಂದೆರಡು ದಿನಗಳಲ್ಲಿ ನಿರ್ಧರಿಸುವುದಾಗಿ ತಿಳಿಸಿದರು.

Home add -Advt

ಇನ್ನು ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ವಿಚಾರವಾಗಿ ಮಾತನಾಡಿದ ಸಚಿವರು, ಎಸ್.ಎಸ್.ಎಲ್.ಸಿ ಪರೀಕ್ಷೆ ಇರುವುದು ಜೂನ್ ನಲ್ಲಾಗಿರುವುದರಿಂದ ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ತೀರ್ಮಾನಿಸಲಾಗುವುದು ಎಂದರು.

ಲಾಕ್ ಡೌನ್ ಬಗ್ಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ ಗೃಹ ಸಚಿವ

Related Articles

Back to top button