ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಸುರೇಶ್ ಕುಮಾರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸುರೇಶ್ ಕುಮಾರ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ಅವರಿಗೆ ಮೆದುಳು ಜ್ವರ ತಗುಲಿರುವ ಮಾಹಿತಿ ಲಭ್ಯವಾಗಿದೆ. ಕಳೆದ ಮೂರು-ನಾಲ್ಕು ದಿನಗಳಿಂದ ವಿಪರೀತ ಜ್ವರದಿಂದ ಸುರೇಶ್ ಕುಮಾರ್ ಬಳಲುತ್ತಿದ್ದಾರೆ.
ಅವರನ್ನು ಶೇಷಾದ್ರಿಪುರಂ ಖಾಸಗಿ ಆಸ್ಪತ್ರೆಗೆದಾಖಲಿಸಲಾಗಿತ್ತು. ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ