Latest

ಆನ್ ಲೈನ್ ಕ್ಲಾಸ್ ಹೆಸರಲ್ಲಿ ಮಕ್ಕಳಿಗೆ ಶೋಷಣೆಯಾಗಬಾರದು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆನ್​ಲೈನ್ ಶಿಕ್ಷಣದ ಹೆಸರಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಸಿದ್ದಾರೆ.

ಲಾಕ್ ಡೌನ್ ಹಿನ್ನಲೆಯಲ್ಲಿ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೂ ಆನ್​ಲೈನ್ ತರಗತಿ ಕೊಡಲಾಗುತ್ತಿದೆ. ಆದರೆ, ಕೆಲ ಖಾಸಗಿ ಶಾಲೆಗಳು ಆನ್ ಲೈನ್ ತರಗತಿ ನೀಡುವ ನಿಟ್ಟಿನಲ್ಲಿ ಮಕ್ಕಳ ಮೆಲೆ ಒತ್ತಡ ಹೇರುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಸುರೇಶ್ ಕುಮಾರ್, ಶಿಕ್ಷಣ ಸಂಸ್ಥೆಗಳು ಅನವಶ್ಯಕ ಶೋಷಣೆಗೆ ಮುಂದಾಗಬಾರದು. ಆನ್​ಲೈನ್​​ನಲ್ಲಿ ತರಗತಿ ನಡೆಸುವ ಮುನ್ನ ಮಕ್ಕಳ ಗಮನ ಅವಧಿ(Attention Span) ಹಾಗೂ ಅಡ್ಡಪರಿಣಾಮಗಳನ್ನ ಗಮನದಲ್ಲಿಟ್ಟುಕೊಳ್ಳಬೇಕು ಎಂದು ತಾಕೀತು ಮಾಡಿದ್ದಾರೆ.

ಅನಗತ್ಯವಿದ್ದರೂ ದಿನವಿಡೀ ಆನ್​ಲೈನ್ ತರಗತಿ ನೀಡುತ್ತಿರುವ ಕ್ರಮಗಳಿಗೆ ಕಡಿವಾಣ ಹಾಕಲು ಕೂಡಲೇ ಸುತ್ತೋಲೆ ಹೊರಡಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button