ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಮೇ 24ರಿಂದ ಪಿಯುಸಿ ಹಾಗೂ ಜೂನ್ 20ರಿಂದ ಎಸ್ಎಸ್ಎಲ್ ಸಿ ಪರೀಕ್ಷೆಗಳು ಆರಂಭವಾಗಲಿವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪರೀಕ್ಷಾ ಕೇಂದ್ರಗಳು ಸುರಕ್ಷತಾ ಕೇಂದ್ರಗಳಾಗಿರಲಿದ್ದು, ಎಸ್‍ಎಸ್‍ಎಲ್ ಸಿಗೆ 8,75,798 ಜನ ವಿದ್ಯಾರ್ಥಿಗಳ ನೋಂದಣಿಯಾಗಿದೆ. ಪಿಯುಸಿಗೆ 7,01,651 ಮಂದಿ ವಿದ್ಯಾರ್ಥಿಗಳ ನೋಂದಣಿ ಮಾಡಲಾಗಿದೆ ಎಂದರು.
ಪರೀಕ್ಷೆಗಳನ್ನು ನಡೆಸುವುದು ಸರ್ಕಾರದ ಕರ್ತವ್ಯ. ಕೊರೊನಾ ನಡುವೆಯೂ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ನಿಜವಾದ ಕೊರೊನಾ ವಾರಿಯರ್ಸ್. ಮೇ ನಲ್ಲಿ ಕೊರೊನಾ ಸೋಂಕು ಕಡಿಮೆಯಾಗಲಿದೆ ಎಂಬ ವರದಿಯಿದೆ. ಹಾಗಾಗಿ ಮೇ 24ರಿಂದ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಇನ್ನು ಖಾಸಗಿ ಶಾಲೆಗಳ ಟ್ಯೂಷನ್ ಪೀಸ್ ವಿಚಾರ ಹೈಕೋರ್ಟಿನಲ್ಲಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ