Politics

*ನಾನು ಆರೋಗ್ಯವಾಗಿದ್ದೇನೆ: ಮಾಜಿ ಸಚಿವ ಸುರೇಶ್ ಕುಮಾರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಮಾಧ್ಯಮಗಳಲ್ಲಿ ತಮ್ಮ‌ ಅನಾರೋಗ್ಯ ಕುರಿತಂತೆ ಪ್ರಸಾರವಾಗುತ್ತಿರುವ ವದಂತಿಗಳನ್ನು ನಂಬುವುದು ಬೇಡ. ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತಂತೆ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಅವರು ಚಿಕೂನ್ ಗುನ್ಯಾ ತಮ್ಮನ್ನು ಕೆಲ ದಿನಗಳಿಂದ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಜ್ವರದಿಂದ ಈಗ ಸಂಪೂರ್ಣ ಚೇತರಿಕೆ‌ ಕಂಡಿದ್ದು, ಗುಣಮುಖನಾಗಿದ್ದೇನೆ ಹಾಗೂ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ.‌ ಕಾಳಜಿ ಹೊಂದಿರುವ ತಮ್ಮ ಹಿತೈಶಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ‌ ಎಂದಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button