
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿದ್ದ ಹಲವು ಹಿರಿಯ ನಾಯಕರನ್ನು ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸಂಪುಟದಲ್ಲಿ ಕೈಬಿಡಲಾಗಿದ್ದು, ಇದೇ ವೇಳೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರಿಗೂ ಕೊಕ್ ನೀಡಲಾಗಿದೆ.
ಈ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸುರೇಶ್ ಕುಮಾರ್, ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಹಕರಿಸಿದ ರಾಜ್ಯದ ಜನತೆಗೆ ಧನ್ಯವಾದ ಎಂದು ಹೇಳಿದ್ದಾರೆ.
ಇನ್ನು ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಆರ್.ಶಂಕರ್, ಜಗದೀಶ್ ಶೆಟ್ಟರ್, ಶ್ರೀಮಂತ ಪಾಟೀಲ್ ಅವರನ್ನು ಬೊಮ್ಮಾಯಿ ಸಂಪುಟದಿಂದ ಕೈಬಿಡಲಾಗಿದೆ. ಹಲವು ಹಿರಿಯ ನಾಯಕರಿಗೆ ಸಂಪುಟದಿಂದ ಕೊಕ್ ನೀಡಲಾಗಿದ್ದು, ಪಕ್ಷ ಸಂಘಟನೆಗೆ ಅವರನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ