Latest

ಖಾಸಗಿ ಶಾಲೆಗಳಿಗೆ ಶಿಕ್ಷಣ ಸಚಿವರ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪೋಷಕರು ವಿದ್ಯಾರ್ಥಿಗಳ ಶುಲ್ಕ ಪಾವತಿ ಮಾಡಿಲ್ಲ ಎಂದು ಆನ್ ಲೈನ್ ಕ್ಲಾಸ್ ಗಳನ್ನು ನಿಲ್ಲಿಸುವಂತಿಲ್ಲ. ಹಾಗೆ ಮಾಡಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆನ್ ಲೈನ್ ಕ್ಲಾಸ್ ಯಾವುದೇ ಕಾರಣಕ್ಕೂ ನಿಲ್ಲಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್, ಹೈಕೋರ್ಟ್ ಕೂಡ ಸೂಚನೆ ನಿಡಿದೆ. ಅಲ್ಲದೆ ಈ ಬಗ್ಗೆ ಸಿಎಂ ಯಡಿಯೂರಪ್ಪ ಕೂಡ ಖಾಸಗಿ ಶಾಲೆಗಳಿಗೆ ಸಲಹೆ ನೀಡಿದ್ದಾರೆ ಎಂದರು.

ಇನ್ನು ಕೆಲ ಖಾಸಗಿ ಶಾಲೆಗಳು ಫೈನಾನ್ಸ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಬಡ್ಡಿ ಹಣ ಪಡೆದು ವಿದ್ಯಾರ್ಥಿಗಳ ಶುಲ್ಕ ಪಾವತಿ ಮಾಡುವಂತೆ ಪೋಷಕರ ಮೇಲೆ ಒತ್ತಡ ಹಾಕುತ್ತಿರುವುದಾಗಿ ಆರೋಪ ಕೇಳಿಬರುತ್ತಿದೆ. ಇಂತಹ ಶಾಲೆಗಳ ಬಗ್ಗೆ ಬಿಇಒಗೆ ದೂರು ನೀಡಿದರೆ ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಪೆಟ್ರೋಲ್ ದರ ಮತ್ತೆ ಏರಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button