Latest

ಎಸ್‌ಎಸ್‌ಎಲ್‌ಸಿ ವೇಳಾ ಪಟ್ಟಿ ಸೋಮವಾರ ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಇಂಗ್ಲೀಷ್‌ ಪತ್ರಿಕೆ ಪರೀಕ್ಷೆ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಾಹಿತಿ ನೀಡಿರುವ ಸಚಿವ ಸುರೇಶ್‌ ಕುಮಾರ್‌, 10ನೇ ತರಗತಿ ಪರೀಕ್ಷೆಗಳನ್ನು ಶೀಘ್ರದಲ್ಲಿ ನಡೆಸುವ ಸಲುವಾಗಿ ಶಿಕ್ಷಣ ಇಲಾಖೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ಸೋಮವಾರ ಈ ಕುರಿತು ಮಹತ್ವದ ಚರ್ಚೆ ನಡೆಯಲಿದ್ದು, ಆನಂತರ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ಕಾಯುವುದು ಮುಖ್ಯವಾಗಿದೆ. ಈ ಹಿನ್ನಲೆಯಲ್ಲಿ ವಿದ್ಯರಥಿಗಳಿಗೆ ತಮ್ಮ ಮನೆ ಪಕ್ಕದಲ್ಲೇ ಇರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬಹುದು, ಎಷ್ಟು ಶೈಕ್ಷಣಿಕ ದಿನಗಳು ಕಡಿಮೆ ಆಗುತ್ತದೆ ಎಂಬ ಬಗ್ಗೆ ಶಿಕ್ಷಣ ಇಲಾಖೆ ಅಧ್ಯಯನ ಮಾಡುತ್ತಿದೆ. ಅಲ್ಲದೆ, ತರಗತಿಗಳನ್ನು ಶಿಫ್ಟ್ ನಲ್ಲಿ‌ ನಡೆಸಬೇಕಾ ಅಥವಾ ಪರ್ಯಾಯ ವ್ಯವಸ್ಥೆ ‌ಮಾಡಬೇಕಾ? ಎಂಬ ಬಗ್ಗೆಯೂ ಚರ್ಚೆಯೂ ನಡೆಯುತ್ತಿದೆ.

Home add -Advt

ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಗಳನ್ನು ಯಾವಾಗ ಆರಂಭ ಮಾಡಬೇಕು ಎಂಬ ಚರ್ಚೆಯೂ ನಡೆಯುತ್ತಿದೆ. ಆದರೆ, ಈ ಹಿಂದೆ ಇದ್ದ ರೀತಿ ಜೂನ್ 1 ಕ್ಕೆ ಶಾಲೆ ಪುನಾರಂಭ ಸಾಧ್ಯತೆ ಕಡಿಮೆ. ಅಲ್ಲದೆ, ಈ ವರ್ಷ ಯಾವುದೇ ಶಾಲೆಗಳು ಶುಲ್ಕದಲ್ಲಿ ಹೆಚ್ಚಳ ಮಾಡದಂತೆ ಸೂಚಿಸಲಾಗಿದ್ದು, ಸಾಧ್ಯವಾದರೆ ಕಡಿಮೆ ಮಾಡಲು ತಿಳಿಸಲಾಗಿದೆ ಎಂದು ಹೇಳಿದರು.

ಜೂ.15ರಿಂದ ಪ್ರಾಥಮಿಕ, ಜು.1ರಿಂದ ಪ್ರೌಢ ಶಾಲೆ ಆರಂಭ? ಜೂ.10ರಿಂದ SSLC ಪರೀಕ್ಷೆ?

Related Articles

Back to top button