ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆ ಸಧ್ಯಕ್ಕಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಧ್ಯಕ್ಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ದಿನಾಂಕ ನಿಗದಿ ಮಾಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಪರೀಕ್ಷೆ ದಿನಾಂಕ ನಿಗದಿ ಮಾಡಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರೋನಾ ಪರಿಸ್ಥಿತಿ ತಿಳಿ ಆದಮೇಲೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಇಂಗ್ಲಿಷ್​ ಪರೀಕ್ಷೆ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ. ಪರೀಕ್ಷೆ ದಿನಾಂಕ ನಾನೇ ಅಧಿಕೃತವಾಗಿ ಪ್ರಕಟಿಸುತ್ತೇನೆ. ಅಲ್ಲಿಯವರೆಗೂ ವಿದ್ಯಾರ್ಥಿಗಳು ಮತ್ತು ಪೋಷಕರು ವದಂತಿಗಳಿಗೆ ಕಿವಿ ಕೊಡಬಾರದು ಎಂದು ಹೇಳಿದರು.

ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯ ನಂತರ ಪೂರಕ ಪರೀಕ್ಷೆಗೆ ಚಿಂತನೆ ಮಾಡಲಾಗಿದೆ. ರಜೆ ಸಮಯದಲ್ಲಿ ಹತ್ತನೇ ತರಗತಿ ಮಕ್ಕಳು ಏನ್ ಮಾಡ್ಬೇಕು ಅನ್ನೋದ್ರ ಬಗ್ಗೆ ಸೂಚನೆ ಪ್ರಕಟಿಸಲಾಗುವುದು. ಸೋಮವಾರ ಮಧ್ಯಾಹ್ಯ ರಾಜ್ಯದ ಎಲ್ಲಾ ಡಿಡಿಪಿಐ ಹಾಗೂ ಪ್ರಾಂಶುಪಾಲರ ಜೊತೆ ವೀಡಿಯೋ ಕಾನ್ಪರೆನ್ಸ್ ಸಭೆ ಕರೆಯಲಾಗಿದೆ. ಶಿಕ್ಷಣ ಇಲಾಖೆಯಿಂದ ಯೂಟ್ಯೂಬ್ ಚಾನೆಲ್ ಮಾಡಿ, ಅದರ ಮೂಲಕ ಮಕ್ಕಳಿಗೆ ತರಗತಿ ನಡೆಸಲು ನಿರ್ಧಾರ ಮಾಡಲಾಗಿದೆ ಎಂದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button