Belagavi NewsBelgaum NewsKarnataka NewsLatestSports

*ಬಂಟರ ಕ್ರೀಡೋತ್ಸವಕ್ಕೆ ಚನ್ನರಾಜ ಹಟ್ಟಿಹೊಳಿ ಚಾಲನೆ*

ಪ್ರಗತಿವಾಹಿನಿ ಸುದ್ದಿ: ನಗರದಲ್ಲಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಬಂಟರ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಂಟರ ಕ್ರೀಡೋತ್ಸವಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಚಾಲನೆ ನೀಡಿದರು.

Home add -Advt


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ದೇಹದ ಆರೋಗ್ಯಕ್ಕೆ ಮಾತ್ರವಲ್ಲದೆ ಮನಸ್ಸಿನ ಚೈತನ್ಯಕ್ಕೂ ಸಹಕಾರಿ ಎಂದು ತಿಳಿಸಿದರು. ಸಮಾಜದ ಒಗ್ಗಟ್ಟು ಮತ್ತು ಬಾಂಧವ್ಯವನ್ನು ಬಲಪಡಿಸುವಲ್ಲಿ ಇಂತಹ ಕ್ರೀಡೋತ್ಸವಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು. ಯುವಕರು ಕ್ರೀಡೆಗಳತ್ತ ಹೆಚ್ಚು ಆಸಕ್ತಿ ತೋರಿಸಿ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.


ಬಂಟ ಸಮುದಾಯವು ಶಿಕ್ಷಣ, ಉದ್ಯಮ ಹಾಗೂ ಸಮಾಜ ಸೇವೆಯಲ್ಲಿ ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದ್ದು, ಇಂತಹ ಕ್ರೀಡಾ ಕಾರ್ಯಕ್ರಮಗಳ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆಯುತ್ತದೆ ಎಂದು ಹೇಳಿದರು.


ಈ ಕ್ರೀಡೋತ್ಸವದಲ್ಲಿ ವಿವಿಧ ವಯೋಮಾನದವರಿಗೆ ತಕ್ಕಂತೆ ಹಲವು ಕ್ರೀಡಾ ಸ್ಪರ್ಧೆಗಳು ಆಯೋಜಿಸಲಾಗಿದ್ದು, ಮಹಿಳೆಯರು ಮತ್ತು ಮಕ್ಕಳೂ ಸಹ ಉತ್ಸಾಹದಿಂದ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬಂಟ್ ಸಮುದಾಯದ ಮುಖಂಡರು, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

Related Articles

Back to top button