ಪ್ರಗತಿವಾಹಿನಿ ಸುದ್ದಿ: ಸರ್ವೆ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳುರಿನ ಮೂಡಿಗೆರೆಯಲ್ಲಿ ನಡೆದಿದೆ.
45 ವರ್ಷದ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡವರು. ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಶಿವಕುಮಾರ್, ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಈಗ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೂಡಿಗೆರೆ ಬಸ್ ನಿಲ್ದಾಣದ ಬಳಿಯ ಬಾಡಿಗೆ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ