*ಸರ್ವೆ ಅಧಿಕಾರಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಸರ್ವೆ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳುರಿನ ಮೂಡಿಗೆರೆಯಲ್ಲಿ ನಡೆದಿದೆ. 45 ವರ್ಷದ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡವರು. ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಶಿವಕುಮಾರ್, ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಈಗ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ.Home add -Advt ಮೂಡಿಗೆರೆ ಬಸ್ ನಿಲ್ದಾಣದ ಬಳಿಯ ಬಾಡಿಗೆ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *ಪತ್ನಿಯ ಕಣ್ಣುಗುಡ್ಡೆಗಳನ್ನು ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ*