Politics

*ನಾಗಮೋಹನ್ ದಾಸ್ ಸಮಿತಿ ಶಿಫಾರಸ್ಸಿನಂತೆ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ಆರಂಭ; ಸಿಎಂ*

ಪ್ರಗತಿವಾಹಿನಿ ಸುದ್ದಿ : ಪರಿಶಿಷ್ಟ ಜಾತಿಯ ಒಳಮೀಸಲಾತಿ ಕುರಿತಾದ ಗೊಂದಲ ಶೀಘ್ರವೇ ನಿವಾರಣೆಯಾಗಲಿದ್ದು, ಅದಕ್ಕಾಗಿ ನಿವೃತ್ತ ನ್ಯಾನಾಗಮೋಹನ್ ದಾಸ್ ಅವರ ಸಮಿತಿ ರಚಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.

ಮೈಸೂರು ಜಿಲ್ಲಾಡಳಿತ ಹೆಚ್.ಡಿ ಕೋಟೆಯಲ್ಲಿ ಆಯೋಜಿಸಿದ್ದ ಅಂಬೇಡ್ಕ‌ರ್ ಜಯಂತಿ ಮತ್ತು ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಾಗಮೋಹನ್ ದಾಸ್ ಅವರ ಸಮಿತಿಯ ಶಿಫಾರಸ್ಸಿನಂತೆ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ಆರಂಭಿಸಿದ್ದೇವೆ. ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆ ಒಳ ಮೀಸಲಾತಿಯ ಎಲ್ಲಾ ಗೊಂದಲಗಳನ್ನು ನಿವಾರಿಸುತ್ತದೆ ಎನ್ನುವ ಭರವಸೆ ಇದೆ ಎಂದು ತಿಳಿಸಿದರು.

Home add -Advt

ಅಂಬೇಡ್ಕ‌ರ್ ಅವರು ಮೀಸಲಾತಿ ಕೊಡದೇ ಹೋಗಿದ್ದರೆ ನಾವು ಮನುಷ್ಯರಾಗಲು ಸಾಧ್ಯವೇ ಇರಲಿಲ್ಲ. ನಾನು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಶತ ಶತಮಾನಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಡಲಾಗಿತ್ತು. ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆದು ಮುಖ್ಯಮಂತ್ರಿ ಆದೆ, ಇಲ್ಲದಿದ್ದರೆ ಕುರಿನೊ, ಎಮ್ಮೆನೊ ಕಾಯ್ಕಂಡು ಇರಬೇಕಿತ್ತು. ನಮ್ಮ ಸ್ಥಿತಿಗೆ ಶಿಕ್ಷಣ ಮತ್ತು ಸಾಮಾಜಿಕ ಪರಿಸ್ಥಿತಿಗಳೇ ಕಾರಣವೇ ಹೊರತು ಹಣೆಬರಹ ಕಾರಣ ಅಲ್ಲ. ಪೂರ್ವ ಜನ್ಮದ ಪಾಪದ ಕಾರಣಕ್ಕೆ ಈಗ ಬಡತನ ಬಂದಿದೆ ಎನ್ನುವ ಕರ್ಮ ಸಿದ್ಧಾಂತ ಅಪ್ಪಟ ಸುಳ್ಳು ಅದಕ್ಕೇ ಕರ್ಮ ಸಿದ್ದಾಂತ ತಿರಸ್ಕರಿಸಿ ಎಂದು ಬಸವಣ್ಣನವರು ಕರೆ ನೀಡಿದರು ಎಂದರು.

ನಮ್ಮ ಸರ್ಕಾರ ಬುದ್ಧ ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವ ಕೆಲವರು ಪ್ರಾಣಿಗಳನ್ನು ಪ್ರೀತಿಸುತ್ತಾರೆ. ಪ್ರಾಣಿಗಳನ್ನು ಪ್ರೀತಿಸುವುದು ತಪ್ಪಲ್ಲ, ಆದರೆ ಮನುಷ್ಯರನ್ನು ವಿರೋಧಿಸುವುದು ತಪ್ಪು. ಆರ್ಥಿಕವಾಗಿ ಸರ್ವರಿಗೂ ಶಕ್ತಿ ಬಂದರೆ ಜಾತಿ ಹೋಗುತ್ತದೆ ಎಂದು ಸಿಎಂ ಅಭಿಪ್ರಾಯಪಟ್ಟರು.

Related Articles

Back to top button