
ಪ್ರಗತಿವಾಹಿನಿ ಸುದ್ದಿ: ಮಂಗಳೂರಿನ ಮರೋಳಿಯಲ್ಲಿರುವ ಪ್ರಸಿದ್ಧ ಸೂರ್ಯನಾರಾಯಣ ದೇವಸ್ಥಾನಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಶನಿವಾರ ಮಂಗಳೂರಿನ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಗೋಪೂಜೆ ನೆರವೇರಿಸಿದರು.
ಮಾಜಿ ಸಚಿವ ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.