Latest

ಸುಷ್ಮಾ ಸ್ವರಾಜ್ ನಿಧನ – updated news

ಪ್ರಗತಿವಾಹಿನಿ ಸುದ್ದಿ, ನವದೆಹಲಿ-

ಕೇಂದ್ರದ ಮಾಜಿ ಸಚಿವೆ, ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ.

Home add -Advt

ಕಳೆದ ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೃದಯಾಘಾತದಿಂದ ಸ್ವಲ್ಪ ಹೊತ್ತಿಗೆ ಮೊದಲು ನಿಧನರಾದರು.

ಅವರಿಗೆ ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಕೇಂದ್ರದಲ್ಲಿ ವಿದೇಶಾಂಗ ಸಚಿವರಾಗಿ ಅವರು ಕಾರ್ಯನಿರ್ವಹಿಸಿದ್ದರು. ಮೊದಲ ಮಹಿಳಾ ವಿದೇಶಾಂಗ ಸಚಿವೆ ಎನ್ನುವ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದರು.

ಕರ್ನಾಟಕದೊಂದಿಗೆ ನಿಕಟ ಸಂಬಂಧ ಹೊಂದಿದ್ದ ಅವರು ಬಳ್ಳಾರಿಯಿಂದ ಲೋಕಸಭೆಗೂ ಸ್ಪರ್ಧಿಸಿದ್ದರು.

ಇವತ್ತು ಸಂಜೆಯಷ್ಟೆ ಹೃದಯಾಘಾತದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನಮ್ಮನ್ನು ಬಿಟ್ಟು ಅಗಲಿದ್ದಾರೆ.
67 ವರ್ಷ ವಯಸ್ಸಿನ ಸುಷ್ಮಾ ಇತ್ತೀಚೆಗಷ್ಟೇ ನರೇಂದ್ರ ಮೋದಿ ಸರ್ಕಾರ ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನ ಹಿಂಪಡೆದ ನಿರ್ಧಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.
ಬಿಜೆಪಿಯ ಕಟ್ಟಾ ಅನುಯಾಯಿಯಾಗಿದ್ದ ಇವರು ಇನ್ನು ಮುಂದೆ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಪಡೆಯುತ್ತಿರುವುದಾಗಿ ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಘೋಷಣೆ ಮಾಡಿದ್ದರು.

Related Articles

Back to top button