Kannada NewsKarnataka NewsLatest

*ಬೆಂಗಳೂರಿನಲ್ಲಿ ಶಂಕಿತ ಉಗ್ರ ಜುನೈದ್ ಸಹಚರನ ಬಂಧನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇತ್ತೀಚೆಗಷ್ಟೇ ರಾಜಧಾನಿ ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಮುಂದುವರೆದ ಭಾಗವಾಗಿ ಇದೀಗ ಶಂಕಿತ ಉಗ್ರ ಜುನೈದ್ ಸಹಚರನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ಶಂಕಿತ ಉಗ್ರ ಜುನೈದ್ ಸಹಚರನನ್ನು ಆರ್.ಟಿ.ನಗರ ಪೊಲೀಸರು ಬಂಧಿಸಿದ್ದಾರೆ.

ಮೊಹಮ್ಮದ್ ಅರ್ಷದ್ ಖಾನ್ ಬಂಧಿತ ಆರೋಪಿ. ಈತ 2017ರಲ್ಲಿ ನೂರ್ ಅಹಮದ್ ಎಂಬಾತನನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿರುವ ಪ್ರಕರಣದಲ್ಲಿ ಆರೋಪಿಯಾಗಿದ್ದು, ನಾಲ್ಕು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ. ಅಲ್ಲದೇ ಈತನ ವಿರುದ್ಧ 17 ಪ್ರಕರಣಗಳು ದಾಖಲಾಗಿದ್ದವು.

ಆರ್.ಟಿ.ನಗರ ಪಿಎಸ್ ಐ ವಿನೋದ್ ನಾಯಕ್ ನೇತೃತ್ವದಲ್ಲಿ ಆರೋಪಿ ಬಂಧನಕ್ಕಾಗಿ ವಿಶೇಷ ತಂಡ ರಚನೆ ಮಾಡಲಾಗಿತ್ತು. ಆರ್.ಟಿ.ನಗರದ ಮನೆಯೊಂದರಲ್ಲಿ ಅರ್ಷದ್ ವಾಸವಾಗಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಮುಂಜಾನೆ 5 ಗಂಟೆಗೆ ದಾಳಿ ನಡೆಸಿ ಮನೆ ಸುತ್ತುವರಿದು ಆತನನ್ನು ಬಂಧಿಸಿದ್ದಾರೆ.

Home add -Advt

ಶಂಕಿತ ಉಗ್ರ ಜುನೈದ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಐವರು ಶಂಕಿತರಿಗೆ ಆತ ಗ್ರೆನೇಡ್ ಕಳುಹಿಸುತ್ತಿದ್ದ. ಆರೋಪಿ ಜುನೈದ್ ಗೆ ಸಿಸಿಬಿ ಪೊಲೀಸರು ಲುಕ್ ಔಟ್ ನೋಟೀಸ್ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button