Kannada NewsKarnataka News

ಡಿಎಫಿಒ ಅಮಾನತು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಗೋಕಾಕ ಉಪವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ನಾಯಿಕವಾಡಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಈ ಕುರಿತು ಆದೇಶ ಹೊರಡಿಸಲಾಗಿದ್ದು ಅಮಾನತಿಗೆ ಕಾರಣ ಹೇಳಲಾಗಿಲ್ಲ. ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರೊಂದಿಗೆ ದೂರವಾಣಿ ಸಂಭಾಷಣೆ ವೇಳೆ ಉದ್ಧಟತನದಿಂದ ಮಾತನಾಡಿದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಲಾಗಿದೆ. ಶಾಸಕರು ಯಾುದೋ ಮಾಹಿತಿ ಕೇಳಿದ ಸಂದರ್ಭದಲ್ಲಿ ಏಕವಚನದಲ್ಲಿ, ತೀರಾ ಅಗೌರವ ನೀಡುವ ರೀತಿಯಲ್ಲಿ ನಾಯಕವಾಡಿ ಮಾತನಾಡಿದ್ದರು.

Home add -Advt

ಇಬ್ಬರ ಸಂಭಾಷಣೆಯ ಆಡಿಯೋ ವೈರಲ್ ಆಗಿತ್ತು. ಶಿವಾನಂದ ನಾಯಕವಾಡಿ ಮೇಲೆ ಕ್ರಮ ಕೈಗೊಳ್ಳುವಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

Related Articles

Back to top button