Belagavi NewsBelgaum NewsCrimeKannada NewsKarnataka NewsLatest

*ಹಳೆ ವೈಷಮ್ಯದ ಶಂಕೆ: ಬೆಳಗಾವಿಯಲ್ಲಿ 3 ಯುವಕರ ಮೇಲೆ ತಲ್ವಾರ್‌ ನಿಂದ ಹಲ್ಲೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಅಮನ್ ನಗರದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಮೂವರು ಯುವಕರ ಮೇಲೆ ದುಷ್ಕರ್ಮಿಗಳು ತಲ್ವಾರ್‌ನಿಂದ ಭೀಕರವಾಗಿ ದಾಳಿ ನಡೆಸಿದ ಘಟನೆ ನಡೆದಿದೆ.

ದಾಳಿಗೊಳಗಾದವರನ್ನು ವಲಿ ಶೇಖ್, ಇಮಾಮ್ ಶೇಖ್ ಮತ್ತು ಮಜೀದ್ ಶೇಖ್ ಎಂದು ಗುರುತಿಸಲಾಗಿದೆ. ದಾಳಿಯಿಂದ ತೀವ್ರವಾಗಿ ಗಾಯಗೊಂಡಿರುವ ಯುವಕರನ್ನು ತಕ್ಷಣವೇ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Home add -Advt

ವಿಷಯ ತಿಳಿಯುತ್ತಿದ್ದಂತೆಯೇ ಮಾಳಮಾರುತಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related Articles

Back to top button