
ಪ್ರಗತಿವಾಹಿನಿ ಸುದ್ದಿ: ಎಸ್ ಯುವಿ ಕಾರೊಂದು ಸರಯೂ ಕಲೌಗೆ ಉರುಳಿಬಿದ್ದ ಪರಿಣಾಮ 11 ಜನರು ಸಾವನ್ನಪ್ಪಿರುವ ಘಟನೆ.
ಉತ್ತರ ಪ್ರದೇಶದ ಗೊಂಡಾದಲ್ಲಿ ಸರಯೂ ಕಾಲುವೆಗೆ ಎಸ್ ಯುವಿ ಕಾರು ಬಿದ್ದಿದೆ. 11 ಜನರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರಿನಲ್ಲಿ ಚಾಲಕ ಸೇರಿ 15 ಜನರು ಇದ್ದರು. ಸಿಹಗಾಂವ್ ಗ್ರಾಮದಿಂದ ಖರ್ಗುಪುರದ ಪೃಥ್ವಿನಾಥ ದೇವಸ್ಥಾನಕ್ಕೆ ಹೋಗುತ್ತಿದ ವೇಳೆ ಈ ಅಪಘಾತ ಸಂಭವಿಸಿದೆ. ಗ್ರಾಮಸ್ಥರು ಹಾಗೂ ರಕ್ಷಣಾ ತಂಡದಿಂದ ಶವಗಳನ್ನು ಹೊರತೆಗೆಯಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.