*ಸುವರ್ಣ ವಿಧಾನಸೌಧದ ಮುಂಭಾಗ ಡಾ.ಬಿ.ಆರ್.ಅಂಬೇಡ್ಕರ್, ಕಿತ್ತೂರು ಚೆನ್ನಮ್ಮ ಹಾಗೂ ರಾಯಣ್ಣ ಪುತ್ಥಳಿ ಅನಾವರಣ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗದ ಆವರಣದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಿದರು.
ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪಯೋಗಿ ಇಲಾಖೆಯ ಸಚಿವರಾದ ಸಿ.ಸಿ.ಪಾಟೀಲ, ಸಚಿವರಾದ ಶಶಿಕಲಾ ಜೊಲ್ಲೆ, ಶಂಕರ್ ಪಾಟೀಲ ಮುನೇನಕೊಪ್ಪ, ಮುರುಗೇಶ್ ನಿರಾಣಿ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ದುರ್ಯೋಧನ ಐಹೊಳೆ, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ಶಾಸಕರಾದ ರಮೇಶ್ ಜಾರಕಿಹೊಳಿ, ಅನಿಲ್ ಬೆನಕೆ, ಅಭಯ್ ಪಾಟೀಲ, ಮಹಾಂತೇಶ್ ದೊಡ್ಡಗೌಡ್ರ, ಮಹಾದೇವಪ್ಪ ಯಾದವಾಡ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಪ್ರಕಾಶ್ ಹುಕ್ಕೇರಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ