ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಆರೋಪ ಮುಕ್ತರಾಗಿದ್ದು, ಕೋರ್ಟ್ ಖುಲಾಸೆಗೊಳಿಸಿದೆ.
ಸ್ವಾಮಿ ಚಿನ್ಮಯಾನಂದ ಅವರ ಟ್ರಸ್ಟ್ ನ ಶಹಜಾನ್ ಪುರ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ 2019ರಲ್ಲಿ ಚಿನ್ಮಯಾನಂದರನ್ನು ಬಂಧಿಸಲಾಗಿತ್ತು. ಇದೀಗ ಮೂರು ವರ್ಷದ ಬಳಿಕ ಲಕ್ನೋ ಜನಪ್ರತಿನಿಧಿಗಳ ನ್ಯಾಯಾಲಯ ಚಿನ್ಮಯಾನಂದರನ್ನು ಖುಲಾಸೆಗೊಳಿಸಿದೆ.
ವಿಚಾರಣೆ ವೇಳೆ ಯುವತಿ ತನಗೆ 5 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡಿದ್ದಾಗಿ ಚಿನ್ಮಯಾನಂದ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಯುವತಿಯನ್ನು ಪೊಲೀಸರು ಬಂಧಿಸಿದ್ದರು. ಅಂತಿಮವಾಗಿ ಈಗ ಚಿನ್ಮಯಾನಂದ ಆರೋಪ ಮುಕ್ತ ಎಂದು ಕೋರ್ಟ್ ತೀರ್ಪು ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ