Belagavi NewsBelgaum NewsKannada NewsKarnataka News

*ತಾಯಿ-ಮಗಳೊಂದಿಗೆ ರೂಮ್ ನಲ್ಲಿ ಸಿಕ್ಕಿಬಿದ್ದ ಸ್ವಾಮೀಜಿ?*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪೂರ ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಬಂಧ ಹೊಂದಿರುವ ಆರೋಪದ ಹಿನ್ನಲೆ ಇಡೀ ಗ್ರಾಮಸ್ಥರು ಸೇರಿ ಸ್ವಾಮೀಜಿಯನ್ನು ಮಠದಿಂದ ಹೊರ ಹಾಕಿದ್ದಾರೆ.

ಶನಿವಾರದಂದು ಬಿಜಾಪುರ ಜಿಲ್ಲೆಯ ತಾಳಿಕೋಟಿಯ ಮಹಿಳೆ ತನ್ನ ಮಗಳೊಂದಿಗೆ ಅಡವಿ ಸಿದ್ದೇಶ್ವರ ಮಠಕ್ಕೆ ಆಗಮಿಸಿದರು ಎನ್ನಲಾಗುತ್ತಿದೆ. ರಾತ್ರಿ 10 ಗಂಟೆಗೆ ಸುಮಾರಿಗೆ ಸ್ಥಳೀಯ ಯುವಕರು ಸ್ವಾಮೀಜಿಯ ಕೊಠಡಿಯೊಳಗೆ ಆ ಮಹಿಳೆ ಇರುವುದನ್ನು ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ.

Home add -Advt

ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಸ್ವಾಮಿ ಹಾಗೂ ಮಹಿಳೆ ರೂಂ ನಲ್ಲಿರುವುದನ್ನು ಕಂಡಿದ್ದಾರೆ.

ಗ್ರಾಮದ ಪ್ರಮುಖರು ರಾತ್ರಿ ವೇಳೆ ಮಠದಲ್ಲಿ ಯಾರೂ ಇಲ್ಲದ ವೇಳೆ ಆ ಮಹಿಳೆ ತಮ್ಮ ಕೊಠಡಿಯೊಳಗೆ ಇರುವುದು ಯಾಕೆ ಎಂದು ಸ್ವಾಮೀಜಿಯನ್ನ ಪ್ರಶ್ನಿಸಿದ್ದಾರೆ. ಇದಕ್ಕೆ ಸ್ವಾಮೀಜಿ ವೇಳೆಯಾಗಿದ್ದರಿಂದ ಇಲ್ಲೇ ಉಳಿದುಕೊಂಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮನವರಿಕೆ ಮಾಡಲು ಬಂದರು.

ಅದಕ್ಕೆ ಗ್ರಾಮಸ್ಥರು ಒಪ್ಪಿಲ್ಲ. ಈ ವೇಳೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ತಡರಾತ್ರಿ ಆ ಮಹಿಳೆ ಮತ್ತು ಅವಳ ಮಗಳನ್ನು ಸಾಂತ್ವಾನ ಕೇಂದ್ರಕ್ಕೆ ಬಿಟ್ಟಿದ್ದಾರೆ. 

ರವಿವಾರದಂದು ಇಡೀ ಗ್ರಾಮಸ್ಥರು ಮಠದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಯಾವುದೇ ಕಾರಣಕ್ಕೂ ಸ್ವಾಮೀಜಿ ಮಠದಲ್ಲಿ ಇರಲು ಅವಕಾಶ ಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಸ್ವಾಮೀಜಿಯನ್ನು ಮಠದಿಂದ ಹೊರಹಾಕಿದ ಘಟನೆ ಜರುಗಿದೆ.

Related Articles

Back to top button