Belagavi NewsBelgaum NewsKarnataka News
*ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಕಾರಂಜಿಮಠದ ಗುರುಸಿದ್ದ ಸ್ವಾಮೀಜಿಗಳು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಾರಂಜಿಮಠದ ಗುರುಸಿದ್ದ ಮಹಾಸ್ವಾಮಿಗಳು ಆರೋಗ್ಯ ವಿಚಾರಿಸಿದ್ದಾರೆ.
ಆರೋಗ್ಯ ವಿಚಾರಿಸದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾರು ಗಾಬರಿಯಾಗುವ ಅವಶ್ಯಕತೆ ಇಲ್ಲ. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕ್ಷೇಮವಾಗಿದ್ದಾರೆ. ಅವರಿಗೆ ವಿಶ್ರಾಂತಿ ಬೇಕು. ಸಣ್ಣ ಪುಟ್ಟ ಗಾಯಗಳಾಗಿವೆ, ವೈದ್ಯರು ಚಿಕಿತ್ಸೆ ಕೊಡುತ್ತಿದ್ದಾರೆ. ಆಸ್ಪತ್ರೆ ವೈದ್ಯರಾದ ಡಾ. ರವಿ ಪಾಟೀಲ್ ಅವರು ತುಂಬಾ ಕಾಳಜಿಯಿಂದ ಚಿಕಿತ್ಸೆ ನೀಡುತ್ತಿದ್ದಾರೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ