Latest

ಮತ್ತೆ ಕಿಡಿಗೇಡಿಗಳ ಅಟ್ಟಹಾಸ; ಬೈಕ್ ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಒಂದೆಡೆ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದರೆ ಇನ್ನೊಂದೆಡೆ ಕಿಡಿಗೇಡಿಗಳ ದುಷ್ಕೃತ್ಯಗಳೂ ಹೆಚ್ಚುತ್ತಿವೆ. ಮನೆಯ ಮುಂದೆ ನಿಲ್ಲಿಸಿದ್ದ ಬೈಕ್‍ಗಳಿಗೆ ಬೆಂಕಿ ಇಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಗಾಂಧಿಬಜಾರ್ ಪ್ರದೇಶದ ಜ್ಯುವೆಲ್ಲರಿ ಅಂಗಡಿ ಮುಂದೆ ನಿಲ್ಲಿಸಲಾಗಿದ್ದ ಎರಡು ಮೊಪೆಡ್ ಬೈಕ್‍ಗಳಿಗೆ ಬೆಂಕಿ ಹಚ್ಚಿದ್ದಾರೆ. ಎರಡೂ ಬೈಕ್ ಗಳು ಸುಟ್ಟು ಕರಕಲಾಗಿವೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Home add -Advt

ಕಳೆದ ವಾರವಷ್ಟೇ ಮನೆಯ ಮುಂದೆ ನಿಲ್ಲಿಸಲಾಗಿದ್ದ 17 ದ್ವಿಚಕ್ರ ವಾಹನಗಳ ಬ್ಯಾಟರಿಗಳ ಕಳ್ಳತನ, ಸೀಗೆಹಟ್ಟಿ ಬಡಾವಣೆಯಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣ ಮಾಸುವ ಬೆನ್ನಲ್ಲೇ ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತು ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button