Latest

ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ; ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಹೊತ್ತಿ ಉರಿದ ಬೋಗಿ

ಪ್ರಗತಿವಾಹಿನಿ ಸುದ್ದಿ; ಲಕ್ನೋ: ದೆಹಲಿ-ಘಾಜಿಯಾಬಾದ್ ನಡುವೆ ಸಂಚರಿಸುವ ಸ್ವರ್ಣ್ ಶತಾಬ್ದಿ ಎಕ್ಸ್ ಪ್ರೆಸ್ ರೈಲ್ವೆ ಪಾರ್ಸಲ್ ಕೋಚ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ರೈಲ್ವೆ ನಿಲ್ದಾಣಕ್ಕೆ ರೈಲು ಬಂದು ತಲುಪುತ್ತಿರುವಾಗಲೇ ಈ ಅವಘಡ ಸಂಭವಿಸಿದ್ದು, ಪಾರ್ಸ್ ಲ್ ಕೋಚ್ ಧಗಧಗನೇ ಹೊತ್ತಿ ಉರಿದಿದೆ. ತಕ್ಷಣ ರೈಲ್ವೆ ಅಧಿಕಾರಿಗಳು ಬೋಗಿಯನ್ನು ಇತರ ಕೋಚ್ ಗಳಿಂದ ಬೇರ್ಪಡಿಸಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Home add -Advt

Related Articles

Back to top button