Education

*ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ದಸರಾ ರಜೆ ಘೋಷಿಸಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ನಾಡ ಹಬ್ಬ ದಸರಾಗೆ ಸರ್ಕಾರ ಅದ್ಧೂರಿ ಸಿದ್ದತೆ ನಡೆಸುತ್ತಿದೆ. ಈ ಮಧ್ಯೆ ಶಾಲೆಗಳಿಗೆ ದಸರಾ ರಜೆಯ ಡೇಟ್ ಘೋಷಣೆ ಮಾಡಲಾಗಿದೆ.‌

ಕರ್ನಾಟಕದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಅಕ್ಟೋಬರ್​ 3ರಿಂದ 20ರ ತನಕ ಅಂದರೆ ಒಟ್ಟು 17 ದಿನಗಳ ಕಾಲ ದಸರಾ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕದಲ್ಲಿ 2024-25ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಗಿದ್ದು, ಮೊದಲ ಅವಧಿಯು ಅಕ್ಟೋಬರ್​​ 2ರ ತನಕ ಇರಲಿದೆ. ಸೆಪ್ಟೆಂಬರ್​ 23ರಿಂದ ಮಧ್ಯಂತರ ಪರೀಕ್ಷೆಗಳು ಶುರುವಾಗಿ ಸೆಪ್ಟೆಂಬರ್​ 30ರ ತನಕ ನಡೆಯಲಿದೆ. ಆ ಬಳಿಕ ಸರ್ಕಾರಿ ಮತ್ತು ಖಾಸಗಿ ಶಾಲಾ ಮಕ್ಕಳಿಗೆ ದಸರಾ ರಜೆ ಪ್ರಕ್ರಿಯೆ ಶುರುವಾಗಲಿದೆ. ಅಕ್ಟೋಬರ್​ 2ರಂದು ಎಲ್ಲಾ ಶಾಲೆಗಳಲ್ಲೂ ‘ಗಾಂಧಿ ಜಯಂತಿ’ ಆಚರಿಸಿದ ಮರು ದಿನದಿಂದ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. 

2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನವೇ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಅಕ್ಟೋಬರ್​ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button