
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ ಮಂಗಳವಾರ ಸೋಲಾರ್ ಲ್ಯಾಂಪ್ ಹಾಗೂ ಸೋಲಾರ್ ವಾಟರ್ ಹೀಟರ್ ವಿತರಿಸಿದರು.

ಸರಕಾರ ಯಾವುದೇ ಇರಲಿ, ಕ್ಷೇತ್ರದ ಜನರಿಗೆ ಎಲ್ಲ ರೀತಿಯ ಸೌಲಭ್ಯ ಕೊಡಿಸಲು ನಾನು ಮತ್ತು ಮಾಜಿ ಸಚಿವ ಪ್ರಕಾಶ ಹುಕ್ಕೇರಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದೇವೆ. ಜನರು ಇವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಣೇಶ ಹುಕ್ಕೇರಿ ಕರೆ ನೀಡಿದರು.

ಚಿಕ್ಕೋಡಿ – ಸದಲಗಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ. ಆದರೆ ಪ್ರಕೃತಿ ವಿಕೋಪಗಳಿಂದ ಕೆಲವೊಮ್ಮೆ ಹಿನ್ನಡೆ ಉಂಟಾಗುತ್ತಿದೆ. ಆದರೆ ಇದಕ್ಕೆಲ್ಲ ಧೈರ್ಯಗುಂದದೆ ಮುನ್ನಡೆಯಬೇಕಿದೆ. ಜನರ ಸಹಕಾರ ಹೀಗಿಯೇ ಇದ್ದರೆ ನಾವು ಇನ್ನಷ್ಟು ಸಾಧಿಸಲು ಸಾಧ್ಯ ಎಂದು ಗಣೇಶ ಹುಕ್ಕೇರಿ ಹೇಳಿದರು.
ಅರಣ್ಯ ಇಲಾಖೆಯ ಅಧಿಕಾರಿಗಳು, ಕಾರ್ಯಕರ್ತರು ಇದ್ದರು.