*ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬಾರ್ ನಲ್ಲಿ ಭೀಕರ ಸ್ಫೋಟ: 40 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಬಾರ್ ವೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ದುರಂತದಲ್ಲಿ 40 ಜನರು ಮೃತಪಟ್ಟಿದ್ದಾರೆ. ಸ್ವಿಟ್ಜರ್ಲೆಂಡ್ ನ ಕ್ರಾನ್ಸ್-ಮೊಂಟಾನಾ ನಗರದ ಬಾರ್ ವೊಂದರಲ್ಲಿ ಈ ಘಟನೆ ನಡೆದಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ 40 ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. *BREAKING: ಪ್ರತಿಭಟನೆ ವೇಳೆ ಪೊಲೀಸ್ ಕಾನ್ಸ್ ಟೇಬಲ್ ಗೆ ಕಪಾಳಮೋಕ್ಷ ಮಾಡಿದ ಸ್ವಾಮೀಜಿ* Home add -Advt