Kannada NewsKarnataka NewsLatest

*ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಕಾನ್ಸ್ ಟೇಬಲ್ ಓರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.

ಸೋಮಶೇಖರ್ (39) ಮೃತ ದುರ್ದೈವಿ, ಪೊಲೀಸ್ ಕ್ವಾರ್ಟರ್ಸ್ ನಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾರೆ. ಸಕಲೇಶಪುರದಲ್ಲಿ 112 ಪೊಲೀಸ್ ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

Home add -Advt

ಸೋಮಶೇಖರ್ ವಿರುದ್ಧ ಪತ್ನಿ ಕಿರುಕುಳ ಆರೋಪ ಮಾಡಿ ಡಿವೈಎಸ್ ಪಿಗೆ ದೂರು ನೀಡಿದ್ದಳು ಎನ್ನಲಾಗಿದೆ. ಇದರಿಂದ ಬೇಸರಗೊಂಡು ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.

ಸಕಲೇಶಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button