ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರಿ ಪ್ರಮಾಣದ ಡ್ರಗ್ಸ್ ತಯಾರಿಕೆ ಕೇಂದ್ರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅತಿದೊಡ್ಡ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿರುವ ಸಿಸಿಬಿ ಪೊಲೀಸರು ಬರೋಬ್ಬರಿ 10 ಕೋಟಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ನೈಜಿರೀಯನ್ ಮೂಲದ ಪ್ರಜೆ ಜಾನ್ ಎಂಬಾತ ಸಿಂಥೆಟಿಕ್ ಡ್ರಗ್ಸ್ ತಯಾರಿಕಾ ಫ್ಯಾಕ್ಟರಿಯನ್ನು ನಡೆಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಮನೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 10 ಕೋಟೊ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಹಾಗೂ ಪ್ರಯೋಗಾಲಯದಲ್ಲಿದ್ದ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಬಾಡಿಗೆ ಮನೆಯನ್ನೇ ಡ್ರಗ್ ತಯಾರಿಕಾ ಫ್ಯಾಕ್ಟರಿ ಹಾಗೂ ಪ್ರಯೋಗಾಲಯ ಮಾಡಿಕೊಂಡಿದ್ದ ಆರೋಪಿ ಜಾನ್, 5 ಕೆಮಿಕಲ್ಸ್ ಗಳನ್ನು ಬಳಸಿ ಸಿಂಥೆಟಿಕ್ ಡ್ರಗ್ಸ್ ತಯಾರಿಸುತ್ತಿದ್ದ ಪ್ಯಾಕಿಂಗ್ ಮಾಡಿ ಬ್ರ್ಯಾಂಡೆಂಡ್ ಶೂಗಳಲ್ಲಿ ಅದನ್ನು ಇಟ್ಟು ಮಾರುತ್ತಿದ್ದ ಎಂದು ತಿಳಿದುಬಂದಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ವೃದ್ದ ದಂಪತಿಗಳು ತಮ್ಮ ಮನೆಯನ್ನು ಬಾಡಿಗೆ ನೀಡಿದ್ದರು. ಅವರಿಗೂ ಈ ದಂಧೆ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ.
ಖಾಸಗಿ ಶಾಲೆಗಳ ಶುಲ್ಕ ವಿಚಾರ; ಹೈಕೋರ್ಟ್ ಮಹತ್ವದ ಆದೇಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ