Politics

*ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ವಿಶೇಷ ನ್ಯಾಯಾಲಯದಲ್ಲಿ ಮಾನನಷ್ಟಮೊಕದ್ದಮೆ ದಾಖಲಿಸಿದ್ದಾರೆ.

Home add -Advt

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಕ್ಕೆ ಟಿ.ಜೆ ಅಬ್ರಾಹಂ ಒಬ್ಬ ಬ್ಲ್ಯಾಕ್ ಮೇಲರ್ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಇದೀಗ ಟಿ.ಜೆ.ಅಬ್ರಾಹಂ, ಸಿಎಂ ಸಿದ್ದರಾಮಯ್ಯ ತನ್ನನ್ನು ಬ್ಲ್ಯಾಕ್ ಮೇಲರ್ ಎಂದು ಕರೆದಿದ್ದಕ್ಕೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಟಿ.ಜೆ.ಅಬ್ರಾಹಂ, ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವ ಉತ್ಸಾಹದಲ್ಲಿ ಕೆಲ ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರು ನನ್ನನ್ನು ಬ್ಲ್ಯಾಕ್ ಮೇಲರ್ ಎಂದು ಕರೆದಿದ್ದಾರೆ. ಹಾಗಾಗಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ ಎಂದು ತಿಳಿಸಿದ್ದಾರೆ.

Related Articles

Back to top button