
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನಿಜಾಮುದ್ದೀನ್‍ನ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ ತಬ್ಲಿಘಿಗಳನ್ನು ಹೋಂ ಕ್ವರಂಟೈನ್ ನಲ್ಲಿ ಇರಿಸಲಾಗಿದ್ದು, ಇದೀಗ ಈ ತಬ್ಲಿಘಿಗಳು ವೈದ್ಯರು, ನರ್ಸ್ ಗಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ.
ನಿಜಾಮುದ್ದೀನ್‍ನ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ 167 ಜನರನ್ನು ತುಘಲಕಾಬಾದ್‍ನಲ್ಲಿ 2,140 ಗಂಟೆಗಳ ಕಾಲ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಈ ಪೈಕಿ 97 ಜನರನ್ನು ಡೀಸೆಲ್ ಶೆಡ್ ತರಬೇತಿ ಶಾಲೆಯ ಹಾಸ್ಟೆಲ್ ಕ್ಯಾರೆಂಟೈನ್ ಸೆಂಟರ್ ಮತ್ತು 70 ಜನರಿಗೆ ಆರ್‍ಪಿಎಫ್ ಬ್ಯಾರಕ್ ಕ್ಯಾರಂಟೈನ್ ಸೆಂಟರ್ ನಲ್ಲಿ ಇರಿಸಲಾಗಿದೆ.
ಕ್ವಾರಂಟೈನ್‍ನಲ್ಲಿರುವ ಕೆಲವರು ಅಶಿಸ್ತಿನಿಂದ ವರ್ತಿಸುತ್ತಿದ್ದು, ಆಹಾರ ಪದಾರ್ಥಗಳಿಗೆ ಅಸಮಂಜಸ ಬೇಡಿಕೆ ಇಟ್ಟಿದ್ದರು. ಅಷ್ಟೇ ಅಲ್ಲದೆ ಕ್ಯಾರೆಂಟೈನ್ ಸೆಂಟರ್ ನಲ್ಲಿರುವ ಸಿಬ್ಬಂದಿ, ವೈದ್ಯರೊಂದಿಗೆ ಅಸಭ್ಯವಾಗಿ ನಡೆದುಕೊಂಡು, ಅವರ ಮೇಲೆ ಉಗುಳುವುದು, ಅರೆ ನಗ್ನರಾಗಿ ಓಡಾಡುವುದು, ಅಶ್ಲೀಲ ಸನ್ನೆಗಳನ್ನು ಮಾಡುವುದು ಸೇರಿದಂತೆ ಕೆಟ್ಟದಾಆಗಿ ವರ್ತಿಸುತ್ತಿದ್ದಾರೆ ಎಂದು ಕ್ವಾರಂಟೈನ್ ಸಿಬ್ಬಂದಿಗಳು ದೂರುತ್ತಿದ್ದಾರೆ.
ತಬ್ಲಿಘಿ-ಎ-ಜಮಾತ್ ಎಂಬ ಧಾರ್ಮಿಕ ಸಂಸ್ಥೆ ಮಾರ್ಚ್ 1ರಿಂದ ಮಾರ್ಚ್ 15ರವರೆಗೂ ದೆಹಲಿ ಹೊರವಲಯದಲ್ಲಿರುವ ನಿಜಾಮುದ್ದೀನ್ ಪ್ರಾಂತ್ಯದ ಮರ್ಕಜ್ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಿತ್ತು. ವಿವಿಧ ರಾಜ್ಯಗಳಿಂದ 2,500ಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಂಡೋನೇಷಿಯಾ, ಮಲೇಷಿಯಾ, ಥಾಯ್ಲೆಂಡ್, ಸೌದಿ ಅರೇಬಿಯಾ, ಕಜಕಿಸ್ತಾನ ಸೇರಿದಂತೆ ಒಟ್ಟು 16 ದೇಶಗಳ ಧರ್ಮಗುರುಗಳಿಂದ ಉಪನ್ಯಾಸವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಭಾಗವಹಿಸಿದ್ದ ಹಲವಾರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈಗಾಗಲೇ 10 ಜನರು ಸಾವನ್ನಪ್ಪಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ