Karnataka News

*ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ದುರಂತ: ಬೃಹತ್ ವಯಾಡೆಕ್ಟ್ ಬಿದ್ದು ಆಟೋ ಚಾಲಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿಗೆ ಮತ್ತೊಂದು ಬಲಿಯಾಗಿದೆ. ಬೃಹತ್ ವಯಯಾಡೆಕ್ಟ್ (ಬೃಹತ್ ತಡೆಗೋಡೆ) ಬಿದ್ದು ಆಟೋ ಚಾಲಕರೊಬ್ಬರು ಸಾವನ್ನಪ್ಪಿರುವ ಗಹ್ಟನೆ ನಡೆದಿದೆ.

Home add -Advt

ಬೆಂಗಳೂರಿನ ಯಲಹಂಕ ಬಳಿಯ ಕೋಗಿಲು ಕ್ರಾಸ್ ಬಳಿ ಈ ದುರಂತ ಸಂಭವಿಸಿದೆ. ಖಾಸಿಂ ಮೃತ ಚಾಲಕ. ಮೆಟ್ರೋ ಕಾಮಗಾರಿ ವೇಳೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದಿರುವುದೇ ದುರಂತಕ್ಕೆ ಕರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೆಟ್ರೋ ಕಾಮಗಾರಿಗೆಂದು ಲಾರಿಯಲ್ಲಿ ಬೃಹತ್ ವಯಾಡೆಕ್ಟ್ ತರಲಾಗುತ್ತಿತ್ತು. ಈ ವೇಳೆ ಲಾರಿಯಿಂದ ವಯಾಡೆಕ್ಟ್ ಉರುಳಿ ರಸ್ತೆಯಲ್ಲಿ ನಿಂತಿದ್ದ ಆಟೋ ಚಾಲಕನ ಮೇಲೆ ಬಿದ್ದಿದೆ. ಬೃಹತ್ ತಡೆಗೋಡೆ ಕೆಳಗೆ ಸಿಲುಕಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ನಾಪತ್ತೆಯಾಗಿದ್ದಾನೆ. ಯಲಹಂಕ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button