Latest
*ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡುಕಡೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮಧ್ಯಾಹ್ನದವರೆಗೆ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗಲಿದೆ ಎಂದು ತಿಳಿಸಿದೆ.




