LatestNationalPolitics

*ನಾನಾ ಪಾಟೇಕರ್ ಅವರ ಪಾರ್ಥಿವ ಶರೀರಕ್ಕೆ ಮೃಣಾಲ್ ಹೆಬ್ಬಾಳ್ಕರ್ ಅಂತಿಮ ನಮನ*

ಪ್ರಗತಿವಾಹಿನಿ ಸುದ್ದಿ: ಗೋವಾದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗಿದ್ದ ನಾನಾ ಪಾಟೇಕರ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಮೃಣಾಲ್ ಹೆಬ್ಬಾಳ್ಕರ್ ಅವರು, ಅಗಲಿದ ಹಿರಿಯ ಕಲಾವಿದರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.


ನಂತರ ನಾನಾ ಪಾಟೇಕರ್ ಅವರ ಪುತ್ರ ಮಲ್ಹಾರ್ ಪಾಟೇಕರ್ ಹಾಗೂ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ನಾನಾ ಪಾಟೇಕರ್ ಅವರ ನಿಧನದಿಂದ ಭಾರತೀಯ ಚಿತ್ರರಂಗಕ್ಕೆ, ವಿಶೇಷವಾಗಿ ಅವರ ಅಭಿಮಾನಿಗಳಿಗೆ ಅಪಾರ ನಷ್ಟವಾಗಿದೆ ಎಂದು ಅವರು ಸಂತಾಪ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಿರೀಶ್ ಚೋಡಣ್ಕರ್, ಯುರಿ ಅಲೆಮಾವೊ, ನಿಶಾಂತ್ ಆನಂದ್, ಅರ್ಚಿತ್ ನಾಯಕ್ ಹಾಗೂ ವರದಾ ಮರಾಸೋಲ್ಕರ್ ಉಪಸ್ಥಿತರಿದ್ದರು.

Related Articles

Back to top button