Latest

*ಸರ್ಕಾರ ರಚನೆಗೆ ಸಿದ್ಧರಾಗಿದ್ದೇವೆ ಎಂದ ಡಾ.ಜಿಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಸರ್ಕಾರ ರಚನೆ ಮಾಡಲು ಮಾನಸಿಕವಾಗಿ ಸಿದ್ಧರಾಗಿದ್ದೇವೆ. ಕಾಂಗ್ರೆಸ್ 130 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಜಿ.ಪರಮೇಶ್ವರ್, 2013ರಲ್ಲಿ ನಾನು 120 ಸ್ಥಾನ ಬರುವ ಮುನ್ಸೂಚನೆ ಕೊಟ್ಟಿದ್ದೆ. ಆದರೆ ನಾವು 122 ಸ್ಥಾನಗಳನ್ನು ಗೆದ್ದಿದ್ದೆವು. ಈಗ ನಾವು 130 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದೇನೆ. ನನ್ನ ಲೆಕ್ಕಾಚಾರ ಸರಿ ಆಗಬಹುದು. ಎಲ್ಲಾ ಕಾಲಕ್ಕೂ ಎಲ್ಲಾ ಸಮೀಕ್ಷೆಗಳು ನಿಜವಾಗುವುದಿಲ್ಲ. ಕೆಲವೊಮ್ಮೆ ಸರ್ವೆ ನಿಜವಾಗಿದೆ, ಕೆಲವೊಮ್ಮೆ ಸುಳ್ಳಾಗಿದೆ. ಆದರೂ ಮತದಾನೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮುಂದಿದೆ. ಕಾಂಗ್ರೆಸ್ ಪರ ಅಲೆಯಿರುವುದು ಸಾಬೀತಾಗಿದೆ ಎಂದು ಹೇಳಿದರು.

Home add -Advt

ವರುಣಾದಲ್ಲಿ ಯಾವ ತೊಂದ್ದರೆಯೂ ಇಲ್ಲದೇ ಸಿದದ್ರಾಮಯ್ಯ ಗೆಲ್ಲುತ್ತಾರೆ. ಕೊರಟಗೆರೆಯಲ್ಲಿ ನಾನು ಅತಿ ಹೆಚ್ಚು ಮತಗಳನ್ನು ಪಡೆದು ಗೆಲ್ಲುತ್ತೇನೆ ಎಂದು ಹೇಳಿದರು.

ಇನ್ನು ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಸಿಎಲ್ ಪಿ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ಮಾಡುತ್ತೇವೆ. ಉತ್ತಮ ಆಡಳಿತ ಕೊಡುವವರನ್ನು ಮುಖ್ಯಮಂತ್ರಿ ಮಾಡ್ತಾರೆ. ಹೈಕಮಾಂಡ್ ನನ್ನ ಸಿಎಂ ಮಾಡಿದರೆ ಬೇಡ ಅನ್ನೋಕೆ ಆಗುತ್ತಾ? ಎಂದು ಪ್ರಶ್ನಿಸಿದ್ದಾರೆ.

https://pragati.taskdun.com/cm-basavaraj-bommaibelagavisavadatti-yellammatemplevisit/


Related Articles

Back to top button