Kannada NewsKarnataka NewsLatestPolitics

*ಕಾವೇರಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತಿವೆ; ಸಿಎಂ ಸಿದ್ದರಾಮಯ್ಯ ಕಿಡಿ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾವೇರಿ ವಿಚಾರದಲ್ಲಿ ವಿಪಕ್ಷ ರಾಜಕೀಯ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Home add -Advt

ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾವೇರಿ ವಿಚಾರದಲ್ಲಿ ರಾಜಕಾರಣ ಮಾತ್ತಿವೆ. ರಾಜ್ಯ ಸರ್ಕರ ಕೋರ್ಟ್ ನಲ್ಲಿ ಸಮರ್ಪಕ ವಾದ ಮಂಡಿಸದ ಕಾರಣ ಈ ಸ್ಥಿತಿ ಬಂದಿದೆ ಎಂದು ಆರೋಪಿಸುತ್ತಿದ್ದಾರೆ. ಆದರೆ ಯಡಿಯೂರಪ್ಪ, ಬೊಮ್ಮಾಯಿ ಸಿಎಂ ಆಗಿದ್ದಾಗಲೂ ಇದ್ದ ವಕೀಲರ ತಂಡವೇ ಈಗ ನಮ್ಮ ಕಾಲದಲ್ಲಿಯೂ ಇದೆ. ಹಾಗಿರುವಾಗ ಸಮರ್ಥವಾಗಿ ವಾದ ಮಂಡನೆ ಮಾಡಿಲ್ಲ ಎಂದು ಹೇಳುವುದರಲ್ಲಿ ಅರ್ಥವಿಲ್ಲ. ನಾವು ಸಮರ್ಥವಾಗಿಯೇ ವಾದ ಮಂಡಿಸಿದ್ದೇವೆ ಎಂದರು.

ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತಪ್ಪು ಮಾಹಿತಿ ನೀಡುತ್ತಾ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ, ಸರ್ವ ಪಕ್ಷದ ಸಭೆಗೆ ಬಂದು ಕಾವೇರಿ ನದಿ ನೀರಿನ ವಿಚರವಾಗಿ ಸಹಕಾರ ಕೊಡುವುದಾಗಿ ಹೇಳಿದರು. ಹೊರಗೆ ಬರುತ್ತಿದ್ದಂತೆ ಅನಗತ್ಯ ಆರೋಪಗಳನ್ನು ಮಾಡುತ್ತಾ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Related Articles

Back to top button